Monday, December 23, 2024

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ : ಜೈಸ್ವಾಲ್, ಸಂಜು ಔಟ್

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೊಹಾಲಿಯ ಐಎಸ್​ ಬಿಂದ್ರಾ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಟಿ-20 ಸರಣಿ ನಡೆಯುತ್ತಿದೆ.

7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಜಿಯೋ ಸಿನಿಮಾ ಅಪ್ಲಿಕೇಶನ್​ನಲ್ಲಿ ಉಚಿತವಾಗಿ ಪಂದ್ಯದ ಸ್ಟ್ರೀಮಿಂಗ್ ನೋಡಬಹುದು. ಸ್ಪೋಟ್ಸ್​ 18 ಚಾನೆಲ್​ನಲ್ಲಿ ಪಂದ್ಯದ ನೇರ ಪ್ರಸಾರವಾಗಲಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ತಂಡ

ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್

RELATED ARTICLES

Related Articles

TRENDING ARTICLES