Saturday, January 18, 2025

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ನಟ ಪ್ರಭಾಸ್

ಮಂಗಳೂರು : ಸಲಾರ್ ಸಿನಿಮಾ ಸಕ್ಸಸ್​ ಸಂಭ್ರಮದಲ್ಲಿರುವ ನಟ ಪ್ರಭಾಸ್ ಅವರು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

‘ಸಲಾರ್’ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರದ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಟ ಪ್ರಭಾಸ್ ಅವರಿ​ಗೆ ದೇವಾಲಯದ ವತಿಯಿಂದ ದೇವಿಯ ವಿಗ್ರಹ ನೀಡಿ ಗೌರವ ಸಲ್ಲಿಸಲಾಗಿದೆ.

ಬಾಹುಬಲಿ ಚಿತ್ರದ ಬಳಿಕ ಪ್ರಭಾಸ್ ಸತತ ಸೋಲುಗಳಿಂದ ಕಂಗೆಟ್ಟಿದ್ದರು. ಸಾಹೋ, ರಾಧೆ ಶ್ಯಾಮ್, ಆದಿಪುರಷ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿರಲಿಲ್ಲ. ಇದೀಗ ‘ಸಲಾರ್’ ಚಿತ್ರದ ಸಕ್ಸಸ್​ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಇದೇ ಖುಷಿಯಲ್ಲಿ ಪ್ರಭಾಸ್ ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES