Monday, December 23, 2024

Bigg Boss Kannada: ಫಿನಾಲೆಗೆ ನೇರವಾಗಿ ಟಿಕೆಟ್‌ ಪಡೆದ ಪ್ರತಾಪ್‌; ನಲ್ಮೆಯ ‘ದೀ’ಯನ್ನೇ ಹೊರಗಿಟ್ಟ ಡ್ರೋನ್‌!

ಬೆಂಗಳೂರು: ಫಿನಾಲೆ ಸಮೀಪಿಸುತ್ತಿದ್ದಂತೆಯೇ ಬಿಗ್‌ಬಾಸ್ ಮನೆಯೊಳಗಿನ ಸಂಬಂಧಗಳ ಬಣ್ಣಗಳೆಲ್ಲ ಮಾಸುತ್ತಿವೆ. ಗೆಲುವಿನ ಗುರಿಯೊಂದೇ ಎಲ್ಲರ ಕಣ್ಣಮುಂದೆ ಮಾತ್ರ ಹೊಳೆಯುತ್ತಿದೆ.

ಹೌದು ಈ ಹಿಂದಿನ ಎಪಿಸೋಡ್‌ನಲ್ಲಿ ನಮ್ರತಾ ಅವರು ವಿನಯ್ ಅವರನ್ನು ಆಟದಿಂದ ಕೈಬಿಟ್ಟಾಗಲೇ ಇಂಥದೊಂದು ಸೂಚನೆ ಕಾಣಿಸಿಕೊಂಡಿತ್ತು. ಈಗ ಅಂಥದ್ದೇ ಇನ್ನೊಂದು ಘಟನೆ ಬಿಗ್‌ಬಾಸ್ ಮನೆಯೊಳಗೆ ನಡೆದಿದೆ. ಅದರ ಸೂಚನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ.

ಅತಿ ಹೆಚ್ಚು ಅಂಕ ಗಳಿಸಿಕೊಂಡವರಲ್ಲಿ ಸಂಗೀತಾ ಮತ್ತು ಪ್ರತಾಪ್ ಮಧ್ಯೆ ಪೈಪೋಟಿ ಇತ್ತು. ನಿನ್ನೆ ಒಂದು ಟಾಸ್ಕ್‌ನಲ್ಲಿ ಗೆಲುವು ಕಂಡು ನಮ್ರತಾ ಕೂಡ ರೇಸ್‌ಗೆ ಬಂದಿದ್ದರು. ಮೊದಲ ಕೆಲವು ಟಾಸ್ಕ್‌ಗಳಲ್ಲಿ ಉತ್ತಮವಾಗಿ ಆಡಿದ ವರ್ತೂರು ಸಂತೋಷ್ ಕೂಡ ಇನ್ನೂರರ ಗಡಿ ದಾಟಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್‌ಬಾಸ್ ಮನೆಯಲ್ಲಿ ವಿನಯ್-ಪ್ರತಾಪ್‌ ವಾಗ್ಯುದ್ಧ

ಈ ಹಂತದಲ್ಲಿ ಪ್ರತಾಪ್ ಅವರಿಗೆ ತಮ್ಮ ಎದುರಾಳಿಗಳನ್ನು ಆಯ್ದುಕೊಳ್ಳುವ ಅಧಿಕಾರವನ್ನು ಬಿಗ್‌ಬಾಸ್ ನೀಡಿದ್ದಾರೆ. ಪ್ರತಾಪ್ ಸಂಗೀತಾ ಅವರನ್ನೂ ಆರಿಸಿಕೊಂಡಿದ್ದಾರೆ. ಆದರೆ ಮೊದಲ ಹಂತದಲ್ಲಿ ಯಾರನ್ನಾದರೂ ಹೊರಗಿಡುವ ಸಂದರ್ಭದಲ್ಲಿ ಸಂಗೀತಾ ಅವರನ್ನೇ ಆಟದಿಂದ ಹೊರಗಿಟ್ಟಿದ್ದಾರೆ.

ಸಂಗೀತಾ ದೀ ಎಂದು ಯಾವಾಗಲೂ ಜೊತೆಗಿರುತ್ತಿದ್ದ ಪ್ರತಾಪ್ ಅವರೇ ಅವರನ್ನು ಹೊರಗಿಟ್ಟಿದ್ದು ಸಂಗೀತಾ ಅವರನ್ನು ದಿಗ್ಭ್ರಮೆಗೊಳಿಸಿದೆ. ‘ಇನ್ನೂ ಅವನನ್ನು ಬೆಂಬಲಿಸುತ್ತ ಬಂದೆನಲ್ಲ, ನಾನೆಂಥ ದಡ್ಡಿ’ ಎಂದು ಅವರು ತಮ್ಮನ್ನು ತಾವೇ ಹಳಿದುಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES