Sunday, November 3, 2024

ಜ.22 ರವರೆಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಿ : ಪ್ರಧಾನಿ ಮೋದಿ

ಮಹಾರಾಷ್ಟ್ರ : ಜನವರಿ 22 ರವರೆಗೆ ದೇಶದಲ್ಲಿರುವ ದೇವಸ್ಥಾನ, ತೀರ್ಥ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ.

ಮಹಾರಾಷ್ಟ್ರದ ನಾಸಿಕ್​ನಲ್ಲಿ ಮಾತನಾಡಿರುವ ಅವರು, ಕಾಲಾರಾಮ ಮಂದಿರದ ದರ್ಶನ ಮಾಡುವ ಹಾಗೂ ದೇವಸ್ಥಾನದ ಆವರಣದ ಸ್ವಚ್ಛತೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಅಯೋಧ್ಯೆಯ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾ ವೇಳೆಗೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ.

ನಮ್ಮ ಸರಕಾರ 10 ವರ್ಷ ಪೂರೈಸುತ್ತಿದೆ. ಈ 10 ವರ್ಷಗಳಲ್ಲಿ, ಯುವಕರಿಗೆ ಮುಕ್ತ ಆಕಾಶವನ್ನು ಒದಗಿಸಲು ಮತ್ತು ಯುವಕರು ಎದುರಿಸುತ್ತಿರುವ ಪ್ರತಿಯೊಂದು ಅಡೆತಡೆಗಳನ್ನು ನಿವಾರಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಸಮುದ್ರ ಸೇತುವೆ ಔಪಚಾರಿಕ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇವಸ್ಥಾನದಲ್ಲಿ ‘ಸ್ವಚ್ಛತಾ ಅಭಿಯಾನ’ದಲ್ಲಿ ಭಾಗವಹಿಸಿದರು. ಅದೇ ವೇಳೆ ಭಾರತದ ಅತಿ ಉದ್ದದ ಸಮುದ್ರ ಸೇತುವೆ, 21.8 ಕಿಲೋಮೀಟರ್ ಉದ್ದದ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್​​ನ್ನು (MTHL) ಪ್ರಧಾನಿ ಔಪಚಾರಿಕವಾಗಿ ಉದ್ಘಾಟಿಸಿದರು.

‘ಭಾವಾರ್ಥ ರಾಮಾಯಣ’ ಶ್ಲೋಕ ಆಲಿಸಿದ ಮೋದಿ

ಪ್ರಧಾನಿ ಮೋದಿ ಅವರು ಕಾಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದು ಸಂತ ಏಕನಾಥ್ ಮರಾಠಿಯಲ್ಲಿ ಬರೆದ ‘ಭಾವಾರ್ಥ ರಾಮಾಯಣ’ ಶ್ಲೋಕಗಳನ್ನು ಆಲಿಸಿದರು. ಇದಕ್ಕೂ ಮುನ್ನ ನಾಸಿಕ್‌ನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.

RELATED ARTICLES

Related Articles

TRENDING ARTICLES