Wednesday, January 22, 2025

ವಿರೋಧ ಪಕ್ಷಗಳ INDIA ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ಆಯ್ಕೆ!

ಹೊಸದಿಲ್ಲಿ: ವಿಪಕ್ಷಗಳ ಇಂಡಿಯಾ (I.N.D.I.A) ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನು ಖರ್ಗೆ ಅವರನ್ನು ಇಂದು ಆಯ್ಕೆ ಮಾಡಲಾಗಿದೆ. ಜೆಡಿ(ಯು) ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಆದರೆ ಅವರು ಈ ಹುದ್ದೆಯನ್ನು ಸ್ವೀಕರಿಸಲು ಒಪ್ಪಿಲ್ಲ ಎಂದೂ ವರದಿಯಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿ ಕೇಂದ್ರ ಮಂತ್ರಿ: ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ-HDD 

ಇಂಡಿಯಾ ಮೈತ್ರಿಕೂಟದ ಪ್ರಮುಖರ ವರ್ಚುವಲ್ ಸಭೆಯಲ್ಲಿ ಸರ್ವಾನುಮತದಿಂದ ಈ ಇಬ್ಬರ ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಉಪಸ್ಥಿತರಿರದೇ ಇದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಟಿಎಂಸಿ ನಾಯುಕಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ನಿರ್ಧಾರದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿದು ಬಂದಿದೆ.

ಈ ಹುದ್ದೆಗೆ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕೂಡ ಆಕಾಂಕ್ಷಿ ಎಂದು ತಿಳಿಯಲಾಗಿತ್ತಾದರೂ, ಕಾಂಗ್ರೆಸ್ ಪಕ್ಷದ ಯಾರಾದರೂ ಈ ಹುದ್ದೆ ವಹಿಸಬೇಕೆಂದು ಅವರು ಇಂದಿನ ಸಭೆಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ. ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೆ ಹೊರ ಬೀಳಬೇಕಾಗಿದೆ.

RELATED ARTICLES

Related Articles

TRENDING ARTICLES