ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಈ ರೀತಿ (ಮಗನೇ ಮೋದಿ ಅಂದರೆ) ಮಾತನಾಡಿದರೆ ಸುಮ್ಮನೆ ಇರುತ್ತಾರಾ..? ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಸದ ಅನಂತ್ ಕುಮಾರ್ ಹೆಗಡೆ ಹದ್ದು ಮೀರಿ ವರ್ತಿಸುತ್ತಿದ್ದಾರೆ. ಲಕ್ಷ್ಮಣ ರೇಖೆ ದಾಟಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಷ್ಟು ದಿನ ನಾಪತ್ತೆಯಾದವರು ಈಗ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ತುಂಬಾ ಆಕ್ಟಿವ್ ಆಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಜಿಲ್ಲೆಗೆ ಬಂದಾಗ ಇವರು ಎಲ್ಲಿ ಹೋಗಿದ್ದರು..? ಈಗ ಬಂದು ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ಸಂವಿಧಾನಿಕ ಹುದ್ದೆಯಲ್ಲಿದ್ದವರ ಮೇಲೆ ಈ ರೀತಿ ಮಾತಾಡೋದು ಸರಿಯಲ್ಲ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಅನಂತ್ ಕುಮಾರ್ ಹೆಗಡೆ ಹೇಳಿದ್ದೇನು?
ನೀನು ಬರಲಿ, ಇಲ್ಲ ಬಿಡಲಿ. ರಾಮಮಂದಿರ ಉದ್ಘಾಟನೆ ನಿಲ್ಲೋದಿಲ್ಲ ಮಗನೇ ಎಂದು ಸಿಎಂ ಸಿದ್ದರಾಮಯ್ಯರನ್ನು ಅನಂತ್ ಕುಮಾರ್ ಹೆಗಡೆ ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ. ಆದರೆ, ಜ.2 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ಧಮ್ ಎಂದಿದ್ದರು.