Monday, December 23, 2024

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ : ಕೊಹ್ಲಿ ಇನ್, ಗಿಲ್ ಮತ್ತು ತಿಲಕ್ ಔಟ್

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದೋರ್​ನ ಹೋಲ್ಕರ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸಂಜೆ 7 ಗಂಟೆಗೆ ಆರಂಭವಾಗಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ವಿರಾಟ್​ ಕೊಹ್ಲಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಕೊಹ್ಲಿ ಆಗಮನದಿಂದ ತಿಲಕ್ ವರ್ಮಾ ಅವರಿಗೆ ಕೊಕ್ ನೀಡಲಾಗಿದೆ. ಯಶಸ್ವಿ ಜೈಸ್ವಾಲ್ ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್​ ಆರಂಭಿಸುತ್ತಿದ್ದು, ಶುಭ್​ಮನ್ ಗಿಲ್​ಗೆ ಕೊಕ್ ನೀಡಲಾಗಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ತಂಡ

ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜಿಬುಲ್ಲಾ ಝದ್ರಾನ್, ಕರೀಂ ಜನತ್, ಗುಲ್ಬದಿನ್ ನೈಬ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕೀಬ್.

RELATED ARTICLES

Related Articles

TRENDING ARTICLES