Sunday, May 19, 2024

ಹಂಪಿ ಉತ್ಸವದ ಲಾಂಛನ ಬಿಡುಗಡೆ; ಉತ್ಸವದ ವಿಶೇಷತೆಗಳೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ವಿಜಯನಗರ: ವಿಜಯನಗರ ಜಿಲ್ಲೆಯ ಹಂಪಿಯ ಭವ್ಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಯಲಿದೆ.ಹೌದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವದ ಲಾಂಛನ ಬಿಡುಗಡೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ ನಡೆಯಲಿದೆ. ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯಲ್ಲಿ ಪ್ರತಿ ವರ್ಷ ವಿಜಯ ನಗರ ಸಾಮ್ರಾಜ್ಯ ಮತ್ತು ಹಂಪಿಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವವನ್ನು ಮೂರು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಹಂಪಿ ಉತ್ಸವಕ್ಕಾಗಿ ವಿಜಯನಗರ ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಸರಳವಾಗಿ ಆಚರಣೆ ಮಾಡಲಾಗಿದೆ.

ನಾಲ್ಕು ವೇದಿಕೆ ನಿರ್ಮಾಣ;

ಮುಖ್ಯ ಕಾರ್ಯಕ್ರಮದ ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಒಟ್ಟು ನಾಲ್ಕು ವೇದಿಕೆಗಳನ್ನು ಹಂಪಿ ಉತ್ಸವಕ್ಕಾಗಿ ನಿರ್ಮಾಣ ಮಾಡಲಾಗುತ್ತದೆ. ಹಂಪಿಯ ದೇವಾಲಯಗಳು, ಸ್ಮಾರಕಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗುತ್ತದೆ. ಎಲ್ಲಾ ವರ್ಗದ ಜನರನ್ನು ಸಹ ಹಂಪಿ ಉತ್ಸವಕ್ಕೆ ಆಕರ್ಷಿಸಲು ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ತುಂಗಾರತಿ, ಮಕ್ಕಳಿಗಾಗಿ ವಿಶೇಷ ಸ್ಪರ್ಧೆಗಳು, ರೈತರಿಗಾಗಿ ಕೃಷಿ ವಸ್ತುಗಳ ಮಾರಾಟ, ಪ್ರದರ್ಶನವನ್ನು ಸಹ ಆಯೋಜನೆ ಮಾಡಲಾಗುತ್ತದೆ.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಮಹದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

RELATED ARTICLES

Related Articles

TRENDING ARTICLES