Sunday, December 22, 2024

ರಂಗೇರಿದ ಲೋಕಸಭಾ ಚುನಾವಣೆ ಅಖಾಡ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.

ಕರ್ನಾಟಕದ ಸ್ಥಳೀಯ ಕಾಂಗ್ರೆಸ್ ಘಟಕಕ್ಕೆ ತಿಳಿಸದೆ ಎಐಸಿಸಿ ಕೊಪ್ಪಳ ಕ್ಷೇತ್ರದಲ್ಲಿ ಈಗಾಗಲೇ ಸಮೀಕ್ಷೆ ನಡೆಸಿದೆ. ತೆಲಂಗಾಣದ ಮತ್ತೊಂದು ಸ್ಥಾನದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಯೋಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೊಪ್ಪಳ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದ್ದು, 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಾಂಗ್ರೆಸ್‌ನಲ್ಲಿವೆ.

ಇದನ್ನೂ ಓದಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದಿನಿಂದ ನ್ಯಾಯ್​​ ಯಾತ್ರಾ ಆರಂಭ!

ಎಐಸಿಸಿ ಕೈಗೊಂಡಿರುವ ಸಮೀಕ್ಷೆಯು ಪ್ರಿಯಾಂಕಾ ಗಾಂಧಿಗೆ ಸುರಕ್ಷಿತ ಸ್ಥಾನ ಎಂದು ಸೂಚಿಸಿದೆ. ಪ್ರಸ್ತುತ ಕೊಪ್ಪಳ ಕ್ಷೇತ್ರವನ್ನು ಬಿಜೆಪಿಯ ಕರಡಿ ಸಂಗಣ್ಣ ಪ್ರತಿನಿಧಿಸುತ್ತಿದ್ದಾರೆ. ಈ ಹಿಂದೆ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 1978 ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದ ನಂತರ ರಾಜಕೀಯ ಪುನರ್ಜನ್ಮ ಪಡೆದಿದ್ದರು. ಪ್ರಸ್ತುತ ಈ ಕ್ಷೇತ್ರವನ್ನು ಉಡುಪಿ-ಚಿಕ್ಕಮಗಳೂರು ಎಂದು ಕರೆಯಲಾಗುತ್ತದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿನಿಧಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES