Monday, December 23, 2024

ಕನ್ನಡಿಗ ಅರುಣ್ ಕೆತ್ತಿದ ‘ರಾಮಲಲ್ಲಾ’ನ ಮೂರ್ತಿ ಫೈನಲ್

ಬೆಂಗಳೂರು : ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಕೆತ್ತಿರುವ ಬಾಲರಾಮನ ಮೂರ್ತಿಯೇ ಫೈನಲ್ ಆಗಿದೆ. ಬಾಲರಾಮನ ವಿಗ್ರಹ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.

ಈ ಕುರಿತು ರಾಮಜನ್ಮಭೂಮಿ ತೀರ್ಥ ಕ್ಷೇತ್ರದ (ಟ್ರಸ್ಟ್​) ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ. ಈ ಬಾಲರಾಮನ ವಿಗ್ರಹ ಆಯ್ಕೆಯಾಗಿರುವುದರ ಹಿಂದೆ ಕನ್ನಡಿಗ ಶಿಲ್ಪಿ ಅರುಣ್​ ಅವರ ಅಪಾರ ಪರಿಶ್ರಮ ಅಡಗಿದೆ. ಅಷ್ಟೇ ಅಲ್ಲ ಭಕ್ತಿ, ಶ್ರದ್ಧೆಯಿದೆ. ಅದೇ ಕಾರಣಕ್ಕೆ ಕೋಟ್ಯಂತರ ರಾಮಭಕ್ತರ ಕನಸಿನ ರಾಮಮಂದಿರದಲ್ಲಿ ಅವರು ಕೆತ್ತಿರುವ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಆಗಲಿದೆ.

ಶಿಲ್ಪಿ ಅರುಣ್ ಯೋಗಿರಾಜ್​ ಅವರಿಗೆ ಬೆಂಗಳೂರಿನ ಗಣೇಶ್ ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಮೂರ್ತಿ ಕೆತ್ತನೆಯಲ್ಲಿ ಸಾಥ್ ನೀಡಿದ್ದಾರೆ. ಇದೇ ಜನವರಿ 22ರಂದು ಭವ್ಯ ರಾಮಮಂದಿರ ಲೋಕಾರ್ಪಣೆಗೊಳ್ಳಲಿದ್ದು, ರಾಮಲಲ್ಲಾ ಮೂರ್ತಿ ವಿರಾಜಮಾನವಾಗಲಿದೆ.

RELATED ARTICLES

Related Articles

TRENDING ARTICLES