ಹಾವೇರಿ : ಸಂಸದ ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.
ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಚಾಟಿ ಬೀಸಿದರು.
ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ..? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ..? ಸಂಸ್ಕೃತಿ ಎಂದರೆ ಮನುಷ್ಯತ್ವ, ಮೊದಲು ಮನುಷ್ಯತ್ವ ಇರಬೇಕು ಎಂದು ಛೇಡಿಸಿದರು.
ಈ ಸುದ್ದಿ ಓದಿದ್ದೀರಾ? : ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ : ಮೌನ ಮುರಿದ ವಿಜಯೇಂದ್ರ
ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡಲ್ಲ
ಹಾನಗಲ್ ಸಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿದ ಅವರುಇ, ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.