Wednesday, January 22, 2025

ಮಂಡ್ಯದಲ್ಲಿ ಲವ್ ಜಿಹಾದ್! : ಹಿಂದೂ ಬಾಲಕಿ ಜೊತೆ ಯುವಕ ಎಸ್ಕೇಪ್

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಪರಾರಿಯಾಗಿದ್ದಾನೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ.

ಸೈಯದ್ ತಬ್ರೀಜ್ (19) ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಬಾಲಕಿ ಪೋಷಕರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಯುವಕ ಹಾಗೂ ಬಾಲಕಿಯನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ.

ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಲಕಿ ಕರೆದೊಯ್ದು ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ಕೂಡಲೇ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿವೆ. ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES