Wednesday, January 22, 2025

ಬೈಕ್‌ ಡಿವೈಡರ್‌ಗೆ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ತಂದೆ ಮತ್ತು ಐದು ವರ್ಷದ ಮಗಳು ಮೃತಪಟ್ಟಿರುವ ಘಟನೆ ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 

ಅಡಕಮಾರನಹಳ್ಳಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ

ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನಿತಾ ಮೃತಪಟ್ಟವರು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು.

ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ MS ಧೋನಿಗೆ ಆಹ್ವಾನ

ಅಮಿತ್‌ ಮತ್ತು ಕುಸುಮಾ ಅವರು ತಮ್ಮ ಪುಟ್ಟ ಮಗಳೊಂದಿಗೆ ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಅಲ್ಲಿಂದ ಹಬ್ಬ ಮುಗಿಸಿ ಮರಳುವಾಗ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಪ್ಲೈಓವರ್ ಮೇಲೆ ಅವರು ಚಲಾಯಿಸುತ್ತಿದ್ದ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟರೆ, ತಾಯಿಯ ಸ್ಥಿತಿ ಗಂಭೀರವಾಗಿದೆ.

RELATED ARTICLES

Related Articles

TRENDING ARTICLES