Saturday, January 11, 2025

ಗಾಢ ನಿದ್ರೆಯೊಂದೇ ಮೋದಿ ಮಂತ್ರ : ಸಿದ್ದರಾಮಯ್ಯ ಲೇವಡಿ

ಬೆಂಗಳೂರು : ಗಾಢ ನಿದ್ರೆಯೇ ಪ್ರಧಾನಿ ನರೇಂದ್ರ ಮೋದಿಯವರ ಮಂತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಪ್ರಧಾನಿ ಮೋದಿ ನಿದ್ದೆ ಮಾಡುತ್ತಿರುವ ವ್ಯಂಗ್ಯ ಭರಿತ ಫೋಟೋ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ಎದ್ದೇಳಿ, ಪ್ರಧಾನಿ ಮೋದಿಯವರೇ.. ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಕುಟುಕಿದ್ದಾರೆ.

ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ. ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಟೀಕಿಸಿದ್ದಾರೆ.

ಮೋದಿ ಪರಿಹಾರ ರೈತರಿಗೆ ತಲುಪಿಲ್ಲ

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿ ಸದಾ ಪಲಾಯನ ಮಾಡುತ್ತಾರೆ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ, ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ. ಮೋದಿ ಮಂತ್ರ ಒಂದೇ.. ಕಡೆಗಣಿಸು, ನಿರ್ಲಕ್ಷಿಸು, ನಿದ್ರಿಸು ಹಾಗೂ ಮತ್ತೆ ಅದನ್ನೇ ಪುನರಾವರ್ತಿಸು ಎಂದು ಛೇಡಿಸಿದ್ದಾರೆ.

ಮೋದಿಯದ್ದೇ ಜಪ ಮಾಡಿಕೊಂಡಿರು

ಇನ್ನು ಬಿಜೆಪಿ ಸಂಸದರ ಮಂತ್ರ, ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು ಎಂದು ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.

RELATED ARTICLES

Related Articles

TRENDING ARTICLES