Monday, December 23, 2024

ಘಾಟಿ ಬ್ರಹ್ಮರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ಚಾಲನೆ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ದ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಹಾಗೂ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

15 ದಿನಗಳ ಕಾಲ ದನಗಳ ಜಾತ್ರೆ ನಡೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದನಗಳು ಭಾಗವಗಿಸಿ ಎಲ್ಲರ ಗಮನವನ್ನು ಸೆಳೆದಿದ್ದು ಈ ಬಾರಿಯ ವಿಷೇಶವಾಗಿತ್ತು. ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ಅಲ್ಲಿನ ಮೂಲಭೂತ ಸೌಕರ್ಯಗಳ ಕಡೆ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಬೇಕೆಂದು ಮುಜರಾಯಿ ಸಚಿವರ ಗಮನಕ್ಕೆ ತಂದರು.

ಇದನ್ನೂ ಓದಿ: ಬಾಂಬ್​ ಪತ್ತೆ ಹಾಗು ನಿಷ್ಕ್ರಿಯ ದಳದ ಮೊಬೈಲ್​ ಲ್ಯಾಬ್ ಪರಿಶೀಲಿಸಿದ ಸಿಎಂ!

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೋಯ್ಲಿ, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಡಾ.ಶಿವಶಂಕರ್, ಸ್ಥಳೀಯ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES