Monday, December 23, 2024

ಘಾಟಿ ಬ್ರಹ್ಮರಥೋತ್ಸವದಲ್ಲಿ ಭಾರೀ ಅವಘಡ: ಭಕ್ತನ ಮೇಲೆ ಹರಿದ KSRTC ಬಸ್​

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದಲ್ಲಿ ಕೆಎಸ್ ಆರ್ ಟಿಸಿ ಬಸ್​ ಭಕ್ತನ ಮೇಲೆ ಹರಿದ ಪರಿಣಾಮ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಳಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಸಮೀಪ ನಡೆದಿದೆ.

ಬಸ್‌ ಚಾಲನೆಯಲ್ಲಿದ್ದಾಗಲೇ ವ್ಯಕ್ತಿಯೂ ಬಸ್​​ ನಿಂದ ತರಾತುರಿಯಲ್ಲಿ ಇಳಿಯುವಾಗ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾಲಿಗೆ ಗಂಭೀರವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ: ಇನ್ನೊಂದು ವಾರದಲ್ಲಿ ರಾಜ್ಯದ ರೈತರ ಖಾತೆಗೆ ಬರಪರಿಹಾರ ಹಣ ಜಮೆ!

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

RELATED ARTICLES

Related Articles

TRENDING ARTICLES