ಬೆಂಗಳೂರು: ರಾಜ್ಯ ಸರ್ಕಾರವು IAS ಮತ್ತು KAS ತರಬೇತಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್‌ಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಹೀಗಾಗಿ ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್ ಸೆಂಟರ್ಗಳ ನೋಂದಣಿ ಕಡ್ಡಾಯವಾಗಿ ಮಾಡಬೇಕು. ರಾಜ್ಯದಲ್ಲಿ ಎಗ್ಗಿಲ್ಲದೇ ಕೋಚಿಂಗ್ ಸೆಂಟರ್ಗಳು ತಲೆಯೆತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತೇವೆ ಎಂದು ಅಭ್ಯರ್ಥಿಗಳಿಂದ ಹಣ ಪಡೆಯುತ್ತಿವೆ. ಹೀಗಾಗಿ ಕೋಚಿಂಗ್ ಸೆಂಟರ್ಗಳು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬೈಕ್ ಡಿವೈಡರ್‌ಗೆ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು
ಸುತ್ತೋಲೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಸಂಸ್ಥೆಗಳು 15 ದಿನಗಳಲ್ಲಿ 25,000 ರೂಪಾಯಿ ಶುಲ್ಕವನ್ನು ಪಾವತಿಸಿ ನೋಂದಾಯಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.