ಬೆಂಗಳೂರು: ‘ಪೂಜಿಸಲೆಂದೆ ಹೂಗಳ ತಂದೆ..’ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.ಈ ಹಾಡಿನ ಲಿಂಕ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಹಂಚಿಕೊಂಡು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಶ್ರೀ ಯಾರು ಎಂದು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಟ ನಡೆದಿದೆ.
ಗಾಯಕಿ ಶಿವಶ್ರೀ ಯಾರು..?
ಶಿವಶ್ರೀ ಅವರು ಕಲಾವಿದರ ಕುಟುಂಬದಿಂದಲೇ ಬಂದವರು. ಹೀಗಾಗಿ, ಅವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತದ ಬಗ್ಗೆ ಒಲವು ಇತ್ತು. ಶಾಸ್ತ್ರೀಯ ಸಂಗೀತ, ಭರತನಾಟ್ಯವನ್ನು ಅವರು ಕಲಿತಿದ್ದಾರೆ. ಶಿವಶ್ರೀ ಅವರ ತಾತ ಖ್ಯಾತ ಸಂಗೀತಕಾರರಾಗಿದ್ದರು. ಶಿವಶ್ರೀ ಅವರ ತಂದೆ ಖ್ಯಾತ ಮೃದಂಗ ವಾದಕ ವಿದ್ವಾನ್ ಸೀರ್ಕಾಜಿ ಜೆ. ಸ್ಕಂದಪ್ರಸಾದ್. ಶಿವಶ್ರೀ ಅವರು ಎ.ಎಸ್. ಮುರಳಿ ಮತ್ತು ಆಚಾರ್ಯ ಚೂಡಾಮಣಿ ಅವರಲ್ಲಿ ಸಂಗೀತ ಕಲಿತಿದ್ದಾರೆ. ರೋಜಾ ಕಣ್ಣನ್ ಅವರಿಂದ ಭರತನಾಟ್ಯ ತರಬೇತಿ ಪಡೆದಿದ್ದಾರೆ.