Monday, December 23, 2024

ಬೆಂ.ಗ್ರಾ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ!

ಬೆಂಗಳೂರು ಗ್ರಾ.ಜಿಲ್ಲೆ: ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು 2024 ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು ಜ.16ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕುಣಿಗಲ್ ಕುದುರೆ ಫಾರಂ ಜಾಗಕ್ಕೆ ಕೈಹಾಕಿದರೆ ಬೀದಿಗಿಳಿದು ಹೋರಾಟ:ಚಂದ್ರು ಎಚ್ಚರಿಕೆ

ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ ಜ.23 (ಮಂಗಳವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ 30 ಜನವರಿ 2024 (ಮಂಗಳವಾರ), ನಾಮಪತ್ರಗಳ ಪರಿಶೀಲನೆ ಜ.31, 2024 (ಬುಧವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ ಫೆ.02 (ಶುಕ್ರವಾರ), ಮತದಾನದ ದಿನಾಂಕ ಫೆ.16 (ಶುಕ್ರವಾರ) ಎಂದು ತಿಳಿಸಿದೆ.

ಇನ್ನೂ, ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ ನಡೆಯಲಿದ್ದು, ಮತ ಎಣಿಕೆಯನ್ನು ಫೆ.20 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- 23 ಫೆಬ್ರವರಿ 2024 (ಶುಕ್ರವಾರ) ಎಂದು ತಿಳಿಸಿದೆ.
ಈ ವೇಳಾ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, 181-ನೆಲಮಂಗಲ ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ ಎನ್ ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES