Sunday, December 22, 2024

ಬೆಂಗಳೂರಿನಲ್ಲಿಂದು ಭಾರತ-ಅಫ್ಘಾನಿಸ್ತಾನ್ ಪಂದ್ಯ!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಅಫ್ಘಾನಿಸ್ತಾನ್​ ವಿರುದ್ದ ಮೂರನೇ ಪಂದ್ಯ ಜರುಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಟೀಂ ಇಂಡಿಯಾ ಇದೆ.

ಅತ್ತ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿರುವ ಅಫ್ಘಾನಿಸ್ತಾನ್ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ವೈಟ್ ವಾಶ್ ತಪ್ಪಿಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ. ಹೀಗಾಗಿ ಬೆಂಗಳೂರು ಮೈದಾನದಲ್ಲಿ ಇಂದು ರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಮೋದಿಯವರನ್ನು ಏಕವಚನದಲ್ಲಿ ಬೈದಿಲ್ವಾ?: ಕೋಟಾ ಶ್ರೀನಿವಾಸ ಪೂಜಾರಿ!

ಚಿನ್ನಸ್ವಾಮಿ​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅಫ್ಘಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ವಶಪಡಿಸಿಕೊಂಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ, ಇಂದೋರ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ 6 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಮೂರನೇ ಪಂದ್ಯವನ್ನು ರೋಹಿತ್ ಶರ್ಮಾ ಪಡೆ ಗೆಲ್ಲುವ ವಿಶ್ವಾಸದಲ್ಲಿದೆ.

RELATED ARTICLES

Related Articles

TRENDING ARTICLES