Sunday, November 3, 2024

ಮಾ.25 ರಿಂದ ಏ.6ರವರೆಗೆ SSLC ಪರೀಕ್ಷೆ : ಯಾವ ದಿನ ಯಾವ ಎಕ್ಸಾಂ?

ಬೆಂಗಳೂರು : 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್​ 25ರಿಂದ ಏಪ್ರಿಲ್​ 6 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ.

ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

  • 25-03-2024 : (ಪ್ರಥಮ ಭಾಷೆ) ಕನ್ನಡ, ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು, ಸಂಸ್ಕೃತ
  • 27-03-2024 : ಸಮಾಜ ವಿಜ್ಞಾನ
  • 30-03-2024 : ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  • 02-04-2024 : ಗಣಿತ, ಸಮಾಜ ಶಾಸ್ತ್ರ
  • 03-04-2024 : ಅರ್ಥಶಾಸ್ತ್ರ
  • 04-04-2024 : (ತೃತೀಯ ಭಾಷೆ) ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
  • 06-04-2024 : ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ

ಮೂರು ಬಾರಿ ಪರೀಕ್ಷೆಗೆ ಅವಕಾಶ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಈ ಹಿಂದೆ ಒಂದು ಬಾರಿ ವಾರ್ಷಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ, ಈ ಬಾರಿ ವಿದ್ಯಾರ್ಥಿಗಳು ತಾವು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು.

RELATED ARTICLES

Related Articles

TRENDING ARTICLES