Monday, December 23, 2024

ಕಾಂಗ್ರೆಸ್ ಪಕ್ಷಕ್ಕೆ ಜನ ಬಹಿಷ್ಕಾರ ಹಾಕುತ್ತಾರೆ : ಅನುರಾಗ್ ಠಾಕೂರ್

ನವದೆಹಲಿ : ದೇಶದ ಜನರು ಕಾಂಗ್ರೆಸ್​ ಪಕ್ಷವನ್ನು ಬಹಿಷ್ಕರಿಸುತ್ತಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕುಟುಕಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ದೂರ ಉಳಿದಿದೆ. ಮುಂದಿನ ದಿನಗಳಲ್ಲಿ ದೇಶದ ಜನರು ಇವರನ್ನ ಬಹಿಷ್ಕರಿಸುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಇತರ ಸದಸ್ಯರು ದೊರೆತ ಅವಕಾಶವನ್ನು ನಿರಾಕರಿಸಿದ್ದಾರೆ. ಆ ಮೂಲಕ ಭಗವಾನ್ ರಾಮನ ಭಕ್ತರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಜನರೇ ತಕ್ಕ ಪಾಠ ಕಲಿಸುತ್ತಾರೆ

ಈ ಹಿಂದೆ ವಿರೋಧ ಪಕ್ಷಗಳು ಹೊಸ ಸಂಸತ್ ಭವನ ಉದ್ಘಾಟನೆ ಸಮಾರಂಭವನ್ನು ಬಹಿಷ್ಕರಿಸಿದರು. ಇದಕ್ಕೆ ಪ್ರತಿಯಾಗಿ ಜನರು ವಿರೋಧ ಪಕ್ಷದವರನ್ನು ಬಹಿಷ್ಕರಿಸಿದ್ರು. ಇದೀಗ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಿಂದ ದೂರ ಉಳಿಯಲು ವಿರೋಧ ಪಕ್ಷದವರು ನಿರ್ಧರಿಸಿದ್ದಾರೆ. ಜನರು ಈಗಲೂ ಇವರನ್ನು ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ಅನುರಾಗ್ ಠಾಕೂರ್ ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES