Wednesday, May 8, 2024

ನಂ.1 ಪಟ್ಟಕ್ಕೇರಿದ ಚೆಸ್ ತಾರೆ ಆರ್. ಪ್ರಜ್ಞಾನಂದ

ಬೆಂಗಳೂರು : ಚೆಸ್‌ ಮಾಸ್ಟರ್‌ ವಿಶ್ವನಾಥನ್‌ ಆನಂದ್‌ ಹಿಂದಿಕ್ಕಿ ಆರ್‌. ಪ್ರಜ್ಞಾನಂದ ನಂ.1 ಪಟ್ಟಕ್ಕೇರಿದ್ದಾರೆ.

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸುವ ಮೂಲಕ ಭಾರತದ ಉದಯೋನ್ಮುಖ ಚೆಸ್ ತಾರೆ ಪ್ರಜ್ಞಾನಂದ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ.

ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸಿ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಪ್ರಗ್ನಾನಂದ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಂ.1 ಗ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ.

ನೆದರ್ಲ್ಯಾಂಡ್ ನಲ್ಲಿ ಮಂಗಳವಾರ ನಡೆದ ಟೂರ್ನಿಯಲ್ಲಿ ಅವರು ಈ ಸಾಧನೆಗೆ ಪಾತ್ರರಾದರು. ಇದು 2024ರ ಮೊದಲ ಸೂಪರ್ ಟೂರ್ನಮೆಂಟ್ ಆಗಿತ್ತು. ಗೆಲುವಿನ ಕುರಿತು ಮಾತನಾಡಿದ ಪ್ರಗ್ನಾನಂದ, ಅಂತಹ ಪ್ರಬಲ ಆಟಗಾರನನ್ನು ಸೋಲಿಸಿದರೆ ಯಾವಾಗಲೂ ವಿಶೇಷವಾಗಿರುತ್ತೆ. ಅಲ್ಲದೇ ಚೆಸ್​ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES