Sunday, December 22, 2024

ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಯತೀಂದ್ರ

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.

ಇದನ್ನೂ ಓದಿ: ನಿದ್ರೆ ಸಾಮ್ರಾಜ್ಯದ ಸಿದ್ದರಾಮಯ್ಯ..! : ವಿಜಯೇಂದ್ರ ತಿರುಗೇಟು

ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.

ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES