Saturday, January 18, 2025

ಬಸವಣ್ಣರ ಹೆಸರು ಚಿರಸ್ಥಾಯಿಯಾಗಿಸಿದ್ದೇವೆ : ಸಿದ್ದರಾಮಯ್ಯ

ಬೆಂಗಳೂರು : ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2024 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಶಿಕಾರಿಪುರದವರಾದ್ದರಿಂದ ಅವರ ಹೆಸರನ್ನೂ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು, ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮ ಆಯೋಜಿಸಿರುವ ತೋಟಗಾರಿಕೆ ಇಲಾಖೆಗೆ ಧನ್ಯವಾದಗಳು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

.28 ರವರೆಗೆ ಫಲ ಪುಷ್ಪ ಪ್ರದರ್ಶನ

ಇಂದಿನಿಂದ 28ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ.

RELATED ARTICLES

Related Articles

TRENDING ARTICLES