ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ಗೆ ಈಗ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಮಾಹಿತಿ ಪ್ರಕಾರ, ಪ್ರಯಾಗ್ ರಾಜ್ 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ವಾದ – ಪ್ರತಿವಾದ ನಡೆದಿದ್ದು, ಗುರುವಾರ (ಜ.18) ಕೋರ್ಟ್ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.
ಪ್ರತಾಪ್ ಹೇಳಿದ್ದೇನು..?
ಇತ್ತೀಚೆಗೆ ಡ್ರೋನ್ ಪ್ರತಾಪ್, ಬಿಗ್ಬಾಸ್ ಮನೆಯಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ ಕಹಾನಿ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟಿದ್ದರು. ಹೋಟೆಲ್ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಅದನ್ನ ಸ್ವಲ್ಪ ಹೇಳಿದೆ. ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋನ್ ಪ್ರತಾಪ್ ಆರೋಪ ಮಾಡಿದ್ದರು.
ನೋಡಲ್ ಅಧಿಕಾರಿ ಎಚ್ಚರಿಕೆ
ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ. ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಹೇಳಿದ್ದಾರೆ.