Tuesday, January 21, 2025

ನಾನು ಕೇಂದ್ರ ಸಚಿವನಾಗುವ ಸುದ್ದಿ ಎಲ್ಲಿ ಹುಟ್ಟಿತು ಎಂಬುದು ನನಗೆ ಯಕ್ಷಪ್ರಶ್ನೆ: HDK

ನವದೆಹಲಿ: ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾನು ಮಂತ್ರಿಯಾಗುತ್ತೇನೆ ಎನ್ನುವ ಸುದ್ದಿ ಯಾವ ಮೂಲಗಳಿಂದ ಅಷ್ಟು ಪ್ರಾಮುಖ್ಯತೆ ಪಡೆಯಿತೋ ಎನ್ನುವುದು ನನಗೆ ಗೊತ್ತಿಲ್ಲ. ಅದು ಎಲ್ಲಿಂದ ಬಂದಿತು, ಹುಟ್ಟಿತು ಎನ್ನವುದೂ ನನಗೆ ತಿಳಿದಿಲ್ಲ. ಮಾಧ್ಯಮಗಳ ಮೂಲಕವೇ ನನಗೆ ಆ ವಿಷಯ ಗೊತ್ತಾಯಿತು ಎಂದು ಹೇಳಿದರು.

ಇದನ್ನೂ ಓದಿ: ಗ್ಯಾಂಗ್ ರೇಪ್ ಪ್ರಕರಣ SITಗೆ ವಹಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಚುನಾವಣೆ ಹತ್ತಿರದಲ್ಲಿ ಇದೆ. ಎರಡು ತಿಂಗಳಷ್ಟೇ ಸಮಯ ಉಳಿದಿದೆ. ಈಗ ನಾನು ಮಂತ್ರಿಯಾಗಿ ಮಾಡುವುದು ಏನಿದೆ? ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ನಾನು ಏನು ಕೆಲಸ ಮಾಡಲು ಸಾಧ್ಯ? ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ, ಅದರಿಂದ ಉಪಯೋಗವೂ ಇಲ್ಲ. ಯಾವ ಕಾರಣಕ್ಕೆ ಆ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ನನ್ನಲ್ಲಿ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ಅದಷ್ಟೇ ನನ್ನ ಮುಂದಿರುವ ಎಕೈಕ ಅಜೆಂಡಾ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

RELATED ARTICLES

Related Articles

TRENDING ARTICLES