ಬೆಂಗಳೂರು: ಬೋಯಿಂಗ್ ಫೆಸಿಲಿಟಿ ಕೇವಲ ಒಂದು ಕಂಪನಿ ಮಾತ್ರವಲ್ಲ. ಬೆಂಗಳೂರಿನ ಐಡೆಂಟಿಟಿಯನ್ನು ಸಂಪೂರ್ಣವಾಗಿ ಇದು ಬದಲಿಸುವ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ 1600 ಕೋಟಿ ರೂಪಾಯಿ ವೆಚ್ಚದಲ್ಲಿ 43 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬೋಯಿಂಗ್ ಘಟಕವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿ ಮಾತನಾಡಿದರು, ಆಕಾಂಕ್ಷೆಗಳನ್ನು ನಾವೀನ್ಯತೆ ಮತ್ತು ಸಾಧನೆಯೊಂದಿಗೆ ಸಂಪರ್ಕಿಸುವ ನಗರ ಬೆಂಗಳೂರು. ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಸಂಪರ್ಕಿಸುತ್ತದೆ. ಈ ಹೊಸ ಬೋಯಿಂಗ್ ಕ್ಯಾಂಪಸ್ ಬೆಂಗಳೂರಿನ ಗುರುತನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ಯುನೈಟೆಡ್ ಸ್ಟೇಟ್ಸ್‌ನ ಹೊರಗೆ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ನಲ್ಲಿ ಅಯೋಧ್ಯೆಗೆ ಕೊಡುಗೆ ನಿರೀಕ್ಷೆ
ಇನ್ನು ಪೈಲಟ್ ಆಗುವ ಹೆಣ್ಣುಮಕ್ಕಳ ಕನಸು ನನಸಾಗಲಿದೆ. ಚಂದ್ರಯಾನ ಮೂಲಕ ಯಾವ ದೇಶವೂ ಮಾಡದ ಸಾಧನೆ ಮಾಡಿದ್ದೇವೆ. ನಮ್ಮ ಸ್ಥಾನ ವಿಶ್ವದಲ್ಲಿ ಇನ್ನೂ ಮೇಲಿನ ಸ್ತರಕ್ಕೆ ಈ ಮೂಲಕ ಹೋಗಿದೆ. ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ನಮ್ಮ ಹೆಣ್ಣುಮಕ್ಕಳ ಸಾಮರ್ಥ್ಯ ಇನ್ನಷ್ಟು ಹೆಚ್ಚಿಸಲಿದೆ ಎಂದರು.