Wednesday, January 22, 2025

ಮೊದಲು ಒಳ ಮೀಸಲಾತಿ ಜಾರಿ ಮಾಡಿ: ಗೋವಿಂದ ಕಾರಜೋಳ

ಬೆಂಗಳೂರು: ಮೊದಲು ಒಳ ಮೀಸಲಾತಿ ಜಾರಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯನ ವಿರುದ್ಧ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕ್ಯಾಬಿನೆಟ್​ನಲ್ಲಿ ತೀರ್ಮಾನಿಸಿ‌ ಒಳಮೀಸಲಾತಿ ಘೋಷಿಸ್ತೀವಿ ಅಂತಾ ಕಾಂಗ್ರೆಸ್ ಹೇಳಿತ್ತು.ಆದರೆ ಈಗ ಲೋಕಸಭೆ ಚುನಾವಣೆ ಹಿನ್ನೆಲೆ ಮೋಸದಾಟ ಶುರು ಮಾಡಿದ್ದಾರೆ ಅಂತಾ ಸಿಎಂ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ವೋಟ್‌ ಬ್ಯಾಂಕ್ ಹೋಗುವ ಭಯ‌ ಕಾಂಗ್ರೆಸ್​​ಗೆ ಶುರುವಾಗಿದೆ. ಒಳ ಮೀಸಲಾತಿಯನ್ನು ಜಾರಿ ಮಾಡಿ ಎಂದರು.

ಈ ಮೋಸದಾಟ ಬಿಡಿ:

ಇವತ್ತು ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. 2012ರಲ್ಲಿ ನಾವು ಪತ್ರ ಬರೆದಿದ್ದೆವು. ಇದೇ ಪತ್ರವನ್ನು ಮತ್ತೆ ಬರೆದು ಮೋಸ ಮಾಡುತ್ತಿದ್ದಾರೆ. ಇದಾದ ಬಳಿಕ 2020ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಮತ್ತೆ ಸುಳ್ಳು ಹೇಳಿ ಮೋಸ ಮಾಡುವ ಪ್ರಯತ್ನದಲ್ಲೇ ಸಿದ್ದರಾಮಯ್ಯ ಇದ್ದಾರೆ. ಚುನಾವಣೆ ಬಂದಾಗ ಗಿಮಿಕ್, ಮೋಸದಾಟವನ್ನು ಮಾಡುತ್ತಾರೆ ಎಂದು ಗೋವಿಂದ ಕಾರಜೋಳ ಅವರು ಟೀಕಿಸಿದರು.

ಈ ಮೋಸದಾಟ ಬಿಡಿ. ನಿಮಗೆ ನಿಜವಾದ ಇಚ್ಛಾಶಕ್ತಿ ಇದ್ದರೆ ನಾಳೆಯೇ ಒಂದು ಆದೇಶ ಮಾಡಿ. ಒಳಮೀಸಲಾತಿ ಜಾರಿಗೊಳಿಸಿ. ನಿಮ್ಮನ್ನು ಯಾರೂ ತಡೆಯಲು ಅಸಾಧ್ಯ. ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೋಸದಾಟ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ಎಸ್‌ಸಿ ಪಟ್ಟಿಯಲ್ಲಿ ಸೇರ್ಪಡೆ ಆಗುತ್ತ ಹೋಗಿ, 101 ಜಾತಿಗಳಾದವು. ಎಸ್‌ಟಿಯಲ್ಲಿ 56 ಜಾತಿಗಳಾದವು.

 

 

RELATED ARTICLES

Related Articles

TRENDING ARTICLES