ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇಡೀ ದೇಶ ಕಾತರದಿಂದಿದೆ. ಜನವರಿ 22 ರಂದು ದೇವಸ್ಥಾನದಲ್ಲಿ ರಾಮ ಲಾಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಜನವರಿ 22 ರ ನಂತರ ಸುಮಾರು ಒಂದು ವಾರದ ಬಳಿಕ ಮೋದಿ ಸರ್ಕಾರದ ಈ ಅಧಿಕಾರಾವಧಿಯ ಕೊನೆಯ ಬಜೆಟ್ ಮಂಡನೆಯಾಗಲಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದು, ಅದರ ಮೇಲೆ ರಾಮ ಮಂದಿರದ ಪರಿಣಾಮ ಗೋಚರಿಸಲಿದೆಯೇ? ನಿರ್ಮಲಾ ಸೀತಾರಾಮನ್ ಅವರು ಅಯೋಧ್ಯೆಗೆ ಅನೇಕ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗಳು ಈಗ ಉದ್ಭವವಾಗಿದೆ.
ಇದನ್ನೂ ಓದಿ: ಅಯೋಧ್ಯೆ ರಾಮನಿಗಾಗಿ ನಟಿ ರೂಪಿಕಾ ರಿಂದ ವಿಶೇಷ ಆಲ್ಬಂ ಸಾಂಗ್!
ಸುಮಾರು 3.5 ಲಕ್ಷ ಜನಸಂಖ್ಯೆ ಹೊಂದಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ನಂತರ ಪ್ರವಾಸಿಗರ ಸಂಖ್ಯೆ 10 ಲಕ್ಷ ತಲುಪುವ ಅಂದಾಜಿದೆ. ಅಂತಹ ಪರಿಸ್ಥಿತಿಯಲ್ಲಿ, ಅಯೋಧ್ಯೆಯು ಬಹುದೊಡ್ಡ ನಗರೀಕರಣಕ್ಕೆ ಒಳಗಾಗಲಿದೆ. ಸದ್ಯ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾತ್ರವಲ್ಲದೆ 250ಕ್ಕೂ ಹೆಚ್ಚು ಯೋಜನೆಗಳ ಕಾಮಗಾರಿ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಅಯೋಧ್ಯೆಗೆ ಕೆಲವು ವಿಭಿನ್ನ ಉಡುಗೊರೆಗಳನ್ನು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.