Wednesday, January 22, 2025

ಲವ್ ಫೇಲ್ಯೂರ್; ಮನನೊಂದು ನೇಣಿಗೆ ಶರಣಾದ ವಿದ್ಯಾರ್ಥಿನಿ

ಶಿವಮೊಗ್ಗ: ಲವ್ ಫೇಲ್ಯೂರ್​ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪದ ಗ್ರಾಮದಲ್ಲಿ ನಡೆದಿದೆ. 

ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅಧೀಕ್ಷಾ (20) ಎಂಬಾಕೆ ಮೃತ ದುರ್ದೈವಿ.

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಧೀಕ್ಷಾ ಪ್ರೀತಿಸುತ್ತಿದ್ದ ಯುವಕ ಕೈ ಕೊಟ್ಟು ಮೋಸ ಮಾಡಿದ್ದಕ್ಕೆ ಮನನೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ಆಗುತ್ತಿಲ್ಲ, ವಿಷಾದ ವ್ಯಕ್ತಪಡಿಸುತ್ತೇನೆ:HDK

ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

 

RELATED ARTICLES

Related Articles

TRENDING ARTICLES