ಅಯೋಧ್ಯೆ: ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅದರೆ ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತಿ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ.
ಹೌದು, ಕರ್ನಾಟಕದಿಂದ ಅಯೋಧ್ಯೆಗೆ ಜೀಪ್ನಲ್ಲಿ ತೆರಳಿ 51 ಅಡಿ ಉದ್ದದ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್ಗೆ ನೀಡಿದ್ದಾರೆ. ಅನೇಕ ವರ್ಷಗಳಿಂದ ಈ ಕನ್ನಡಿಗ ಭಕ್ತರು ಧ್ವಜ ನೀಡುವ ಸಂಕಲ್ಪ ಹೊಂದಿದ್ದಾಗಿ ತಿಳಿಸಿದ್ದಾರೆ.
ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹವನ್ನು ಮೈಸೂರಿ ಹೆಮ್ಮೆಯ ಕನ್ನಡಿಗ ಅರುಣ್ ಯೋಗರಾಜ್ರವರು ವಿಗ್ರಹವನ್ನು ಕೆತ್ತನೆ ಮಾಡಿದ್ದಾರೆ.