ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು ಮಧ್ಯಾಹ್ನದ ವೇಳೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಇಂದು ಬೆಳಗ್ಗೆ 7 ಗಂಟೆಗೆ ದೆಹಲಿಯಿಂದ ಹೊರಟು ಬೆಳಗ್ಗೆ 9:35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ, ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಅಲ್ಲಿ ಎರಡು ಗಂಟೆ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಧ್ಯಾಹ್ನ 1ಗಂಟೆಗೆ ಮತ್ತೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ: ʼಅನ್ನಪೂರ್ಣಿʼ ಸಿನಿಮಾ ವಿವಾದ ಬಳಿಕ ‘ಜೈ ಶ್ರೀರಾಮ್’ ಎಂದು ಅಭಿಪ್ರಾಯ ಹಂಚಿಕೊಂಡ ನಯನತಾರಾ!
ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ನಿರ್ಬಂಧಿಸಲಾಗಿದೆ.