Monday, December 23, 2024

ಉಚಿತ ಮೀನುಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನ!

ಬೆಂಗಳೂರು ಗ್ರಾಮಾಂತರ: 2023-24ನೇ ಸಾಲಿನ ಜಿಲ್ಲಾ ಪಂಚಾಯತಿ ಯೋಜನೆಯಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ತಾಲ್ಲೂಕುಗಳ ಮೀನುಗಾರರಿಗೆ ಕೃಷಿ ಹೊಂಡ, ಬಾವಿ ಮತ್ತು ಕಟ್ಟೆಗಳಿಗೆ ಉಚಿತ ಮೀನುಮರಿಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಅವಳ ಗಂಡ, ಇವನ ಹೆಂಡತಿ ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಎರಡು ಕುಟುಂಬಗಳು!

ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಟಾನ ಸಂಬಂಧ 2020-21, 2021-22, 2022-23 ಮತ್ತು 2023-24ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 31‌ ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ
1)ಮೀನುಗಾರಿಕೆ ಸಹಾಯಕ ನಿರ್ದೇಶಕರು, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ 9448500385, 2)ಮೀನುಗಾರಿಕೆ ಸಹಾಯಕ ನಿರ್ದೇಶಕರು, ದೊಡ್ಡಬಳ್ಳಾಪುರ ತಾಲ್ಲೂಕು, ದೂರವಾಣಿ ಸಂಖ್ಯೆ 9945189390 3)ಮೀನುಗಾರಿಕೆ ಸಹಾಯಕ ನಿರ್ದೇಶಕರು, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ 9945189390, 4)ಮೀನುಗಾರಿಕೆ ಸಹಾಯಕ ನಿರ್ದೇಶಕರು, ನೆಲಮಂಗಲ ತಾಲ್ಲೂಕು, ದೂರವಾಣಿ ಸಂಖ್ಯೆ 8747012127 ಅನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES