Thursday, November 21, 2024

ಕಾಂಗ್ರೆಸ್ ಸರ್ಕಾರ ವೋಟ್​ಗಳಿಗಾಗಿ ಆರೋಪಿಗಳನ್ನು ರಕ್ಷಿಸುತ್ತಿದೆ : ಬೊಮ್ಮಾಯಿ

ಹುಬ್ಬಳ್ಳಿ: ಹಾನಗಲ್​​ನಲ್ಲಿ ಮಹಿಳೆ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನಗರದಲ್ಲಿಚಸುದ್ದಿಗಾರರ ಜೊತೆ ಮಾತನಾಡಿದ ಅವರು,“ಹೀನ ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಅತ್ಯಾಚಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಕೊಡಿ ಅಂದರೂ ಯಾಕೆ ಸರ್ಕಾರ ನೀಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ಹಾನಗಲ್​​ನಲ್ಲಿ ಗ್ಯಾಂಗ್​ರೇಪ್ ಪ್ರಕರಣ ಬಹಿರಂಗಗೊಂಡಿದೆ. ನೈತಿಕ ಪೊಲೀಸ್​ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್​​ ಸಕ್ರಿಯವಾಗಿದೆ. ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ವೋಟ್‌ ಬ್ಯಾಂಕ್ ಕಾರಣಕ್ಕೆ ಆರೋಪಿಗಳನ್ನು ಸರ್ಕಾರ ರಕ್ಷಿಸುತ್ತಿದೆ. ಆಡಳಿತ ವ್ಯವಸ್ಥೆ ಕೂಡ ಜೊತೆಗೆ ನಿಂತಿದೆ” ಎಂದು ಬೊಮ್ಮಾಯಿ ಕಿಡಿಕಾರಿದರು.

“ಪೋಕ್ಸೋ ಕೇಸ್​ನಲ್ಲಿ ಪ್ರಕರಣ ದಾಖಲು ಮಾಡಿಲ್ಲ. ಕಾಟಾಚಾರಕ್ಕೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ?” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸರ್ಕಾರದಲ್ಲಿ ಕ್ರಿಮಿನಲ್‌ಗಳಿಗೆ ಕುಮಕ್ಕು ಸಿಗುತ್ತಿದೆ

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕ್ರಿಮಿನಲ್‌ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ” ಎಂದು ಆರೋಪಿಸಿದರು.

“ಹಾನಗಲ್‌ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ‌ಪೊಲೀಸರನ್ನು ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ” ಎಂದು ಆರೋಪಿಸಿದರು.

RELATED ARTICLES

Related Articles

TRENDING ARTICLES