Monday, December 23, 2024

ನಾಳೆ ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಲಿರುವ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು : ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ನಾಳೆ ಅಯೋಧ್ಯೆಗೆ ತೆರಳಲಿದ್ದಾರೆ.

ನಾಳೆ ಸಂಜೆ 2 ಗಂಟೆಗೆ HALನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದು, ಸಂಜೆ 4.30ಕ್ಕೆ ಮಹರ್ಷಿ ವಾಲ್ಮೀಕಿ ಏರ್​​​ಪೋರ್ಟ್​​​​ ತಲುಪಲಿದ್ದಾರೆ. ಕುಟುಂಬ ಸಮೇತವಾಗಿ ರಾಮಮಂದಿರ ಉದ್ಘಾಟನೆಯಲ್ಲಿ ದೇವೇಗೌಡರ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಭೀಮಾ ನದಿ ತಟದಲ್ಲಿ ನಿಷೇಧಾಜ್ಞೆ ಜಾರಿ

ಇನ್ನು ಈ ಪ್ರಯಾಣದಲ್ಲಿ ದೇವೇಗೌಡರ ಪತ್ನಿ ಚೆನ್ನಮ್ಮ, ಮಾಜಿ ಸಿಎಂ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಪತ್ನಿ ರೇವತಿ, ಕುಪೇಂದ್ರ ರೆಡ್ಡಿ ತೆರಳಲಿದ್ದು ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯುವ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸೋಮವಾರ ಸಂಜೆ 4.30ಕ್ಕೆ ಅಯೋಧ್ಯೆಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

RELATED ARTICLES

Related Articles

TRENDING ARTICLES