ಕಲಬುರಗಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ನನಗೆ ಆಮಂತ್ರಣ ಬಂದಿಲ್ಲ ಎಂದು ಸಚಿವ ರಹೀಂ ಖಾನ್ ಹೇಳಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಮಮಂದಿರ ನಿರ್ಮಾಣ ದೇಶದಲ್ಲಿ ಒಳ್ಳೆಯ ಕಾರ್ಯ. ಕಾರ್ಯಕ್ರಮಕ್ಕೆ ಹೋಗಬೇಕಾ? ಬೇಡ್ವಾ? ಎಂಬ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದಲ್ಲಿ ಸಬ್ ಕಾ ಸಾಥ್, ಸಬ್ ವಿಕಾಸ್ ಆಗಿಲ್ಲ. ಬಡವರಿಗೆ, ಯುವಕರಿಗೆ, ನಿರುದ್ಯೋಗಿಗಳನ್ನ ತೆಗೆದುಕೊಂಡು ಹೋಗುವ ಕೆಲಸ ಆಗ್ತಿಲ್ಲ. ಲೋಕಸಭಾ ಚುನಾವಣೆಯೇ ಬೇರೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮನೇ ಬೇರೆ. ಆದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಖಂಡಿತ. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒಂದೇ ಎಂದು ಹೇಳಿದರು.
ಈಗ ಏನಾದರೂ ಹೇಳಿದ್ರೆ ತಪ್ಪಾಗುತ್ತೆ
ಸಂಸದ ಒವೈಸಿ ಹೇಳಿಕೆಗೆ ಪ್ರತಿಕ್ರಿಯೆ ಸಚಿವ ರಹೀಂ ಖಾನ್, ರಾಮಮಂದಿರ ನಿರ್ಮಾಣದ ಬಗ್ಗೆ ಈಗಾಗಲೇ ಎಲ್ಲಾ ಕ್ಲಿಯರೆನ್ಸ್ ಆಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡ ನೀಡಿದೆ. ಈ ಸಂದರ್ಭದಲ್ಲಿ ಏನಾದರೂ ಹೇಳಿದ್ರೆ ತಪ್ಪಾಗುತ್ತೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.
20 ಸ್ಥಾನ ಗೆಲ್ಲಲು ಟಾಸ್ಕ್ ನೀಡಿದ್ದು ನಿಜ
ಲೋಕಸಭೆ ಚುನಾವಣೆ ಗೆಲ್ಲಲು ಸಚಿವರಿಗೆ ಹೈಕಮಾಂಡ್ ಟಾಸ್ಕ್ ನೀಡಿರುವ ವಿಚಾರವಾಗಿ ಮಾತನಾಡಿ, ಚುನಾವಣೆ ಗೆಲ್ಲಲು ಹೈಕಮಾಂಡ್ ಟಾಸ್ಕ್ ನೀಡಿದ್ದು ನಿಜ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಸ್ಥಾನಗಳನ್ನ ಗೆಲ್ಲಿಸಿಕೊಂಡು ಬರದಿದ್ದರೆ ಸಚಿವ ಸ್ಥಾನಕ್ಕೆ ಕುತ್ತು ಅನ್ನೊದು ಸುಳ್ಳು. ಜವಾಬ್ದಾರಿ ನೀಡಿದ್ದು ನೀಜ, ಕನಿಷ್ಠ 20 ಸ್ಥಾನಗಳನ್ನ ಗೆಲ್ಲಲು ಹೈಕಮಾಂಡ್ ಟಾಸ್ಕ್ ನೀಡಿದ್ದು ನಿಜ ಎಂದು ಸಚಿವ ರಹೀಂ ಖಾನ್ ಸ್ಪಷ್ಟಪಡಿಸಿದರು.