Wednesday, January 22, 2025

ಭೀಮಾ ನದಿ ತಟದಲ್ಲಿ ನಿಷೇಧಾಜ್ಞೆ ಜಾರಿ

ವಿಜಯಪುರ: ಭೀಮಾನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ವಿಜಯಪುರ ಜಿಲ್ಲೆ ಚಡಚಣ ಹಾಗೂ ಇಂಡಿ ತಾಲೂಕಿನ ಭೀಮಾನದಿ ತಟ್ಟದಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದಾರೆ.

ನದಿ ತಟದ 100 ಮೀಟರ್ ಅಂತರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಮೇರೆಗೆ ಇಂಡಿ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ನಿಷೇದಾಜ್ಞೆ ಜಾರಿ ಮಾಡಿದ್ದಾರೆ.

ಇದನ್ನೂ ಓದಿ:ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ  

ನದಿ ತಟದ ಗ್ರಾಮಗಳ ಸುತ್ತ-ಮುತ್ತಲ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬಹುಹಳ್ಳಿ ಕುಡಿಯೋ ನೀರಿನ ಯೋಜನೆಗಳಿಗೆ ನೀರಿನ ಅಭಾವ ಉಂಟಾಗಬಾರದು. ನದಿಯ ನೀರನ್ನು ಕೃಷಿಗೆ ಬಳಕೆ ಮಾಡಬಾರದೆಂಬ ಉದ್ದೇಶದಿಮದ ವಿದ್ಯುತ್ ಸಂಪರ್ಕವನ್ನು ಅಧಿಕಾರಿಗಳು ಕಡಿತಗೊಳಿಸಿದ್ದಾರೆ.

RELATED ARTICLES

Related Articles

TRENDING ARTICLES