Wednesday, January 22, 2025

ರಶ್ಮಿಕಾ ಮಂದಣ್ಣ ಡೀಪ್ ಫೇಕ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವನ ಬಂಧನ!

ಹೈದರಾಬಾದ್/ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ಡೀಪ್​ ಫೇಕ್ ವೀಡಿಯೋವನ್ನು ಹರಿಬಿಟ್ಟಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆಂಧ್ರಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದಾದ ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉಚಿತ ಮೀನುಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನ!

ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ದೇಶಾದ್ಯಂತ ಭಾರಿ ಸಂಚಲನ ಉಂಟು ಮಾಡಿತ್ತು. ಪ್ರಮುಖ ಸೆಲೆಬ್ರಿಟಿಗಳು ಕೃತ್ಯವನ್ನು ಖಂಡಿಸಿದ್ದರ ಜತೆಗೆ ಕ್ರಮಕ್ಕೆ ಆಗ್ರಹಿಸಿದ್ದರು. ಇದಾದ ನಂತರ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ 465 (ನಕಲು), 469 (ಗೌರವಕ್ಕೆ ಧಕ್ಕೆ), ಮಾಹಿತಿ ತಂತ್ರಜ್ಞಾನ ಕಾಯ್ದೆ (2000)ಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಬಳಿಕ ಕತ್ರಿನಾ ಕೈಫ್‌, ಕಾಜೋಲ್‌, ಆಲಿಯಾ ಭಟ್‌, ಸಚಿನ್‌ ತೆಂಡೂಲ್ಕರ್‌ ಸೇರಿ ಹಲವರ ಡೀಪ್‌ಫೇಕ್‌ ವಿಡಿಯೊಗಳು ಸುದ್ದಿಯಾಗಿದ್ದವು.

RELATED ARTICLES

Related Articles

TRENDING ARTICLES