Wednesday, January 22, 2025

ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲಿಗೆ 1500ರೂ: ಸಿಎಂ

ತುಮಕೂರು : ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ:

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಖೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ

ವಿಚಾರ ಮಾಡಲಾಗುವುದು :

ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಯಾವಾಗ ಮಾಡಿದರು, ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ , ವಿಚಾರ ಮಾಡಲಾಗುವುದು ಎಂದರು.

ವಿಶೇಷ ಪೂಜೆ:

ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ನಾಳೆ ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.

ನಿಷೇಧ ಇಲ್ಲ ;
ತಮಿಳುನಾಡಿನಲ್ಲಿ ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು ನಿಷೇಧ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುಣಿಗಲ್ ಸ್ಟಡ್ ಫಾರಂ ಸ್ಥಳಾಂತರಕ್ಕೆ ಸಲಹೆ:

ಟಿಪ್ಪು ಸುಲ್ತಾನರ ಕಾಲದ ಕುಣಿಗಲ್ ಸ್ಟಡ್ ಫಾರಂನ್ನು ಸರ್ಕಾರ ಮುಚ್ಚುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಬೆಂಗಳೂರಿನ ಹೃದಯ ಭಾಗದಲ್ಲಿ ರೇಸ್ ಕೋರ್ಸ್ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿ ಎಂದು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು. ಕುಣಿಗಲ್ ನಲ್ಲಿ 400 ಏಕರೆಯಷ್ಟು ಜಮೀನು ಇದ್ದು, ಇಲ್ಲಿ 80 ಏಕರೆ ಯಷ್ಟಿದೆ. ಅಲ್ಲಿ ಸ್ಥಳ ನೀಡುವುದಾಗಿ ಹೇಳಿದ್ದೇನೆ ಎಂದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಅಲ್ಲಿ ಇಂಟಿ ಗ್ರೇಟೆಡ್ ಟೌ ನ್ ಶಿಪ್ ಪ್ರಾರಂಭಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿಗಳು ಹೇಳಿದರು.

RELATED ARTICLES

Related Articles

TRENDING ARTICLES