Wednesday, January 22, 2025

ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ಉದ್ಘಾಟಿಸಿದ ಸಿಎಂ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಇಂದು ಉದ್ಘಾಟಿಸಿದರು,

ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಾಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ. ಶ್ರೀತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೀವ ಬೆದರಿಕೆ: ಜೆಡಿಎಸ್ ಆಕ್ರೋಶ

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES