Saturday, January 18, 2025

ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ತುಮಕೂರು : ಅಯೋಧ್ಯೆಯಲ್ಲಿ ರಾಮಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ನಾಳೆ ರಾಜ್ಯದಲ್ಲಿ ಯಾವುದೇ ಸರ್ಕಾರಿ ರಜೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಳೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಮಹದೇಪುರದಲ್ಲಿ ನಿರ್ಮಾಣ ಆಗಿರುವ ರಾಮಮಂದಿರ ಉದ್ಘಾಟನೆಗೆ ಹೋಗುತ್ತೇನೆ. ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,500 ರೂ. ಹೆಚ್ಚುವರಿಯಾಗಿ ಬೆಂಬಲ ಬೆಲೆ ಕೊಡುತ್ತೇವೆ. ಕುಣಿಗಲ್ ಸ್ಟಡ್ ಫಾರ್ಮ್ ಬದಲು ಇಂಟಿಗ್ರೇಟೆಡ್ ಟೌನ್ ಶಿಪ್ ಮಾಡಲು‌ ನಾನು ಹೇಳಿಲ್ಲ. ಬೆಂಗಳೂರಲ್ಲಿ ಇರುವ ರೇಸ್ ಕೋರ್ಸ್ ಅನ್ನು ಕುಣಿಗಲ್​ಗೆ ಶಿಫ್ಟ್ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಜೆ ಘೋಷಿಸುವಂತೆ ಬಿಜೆಪಿ ಆಗ್ರಹ

ಅಯೋಧ್ಯೆಯಲ್ಲಿ ರಾಮಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ನಾಳೆ (ಜ.22) ರಜೆ ಘೋಷಿಸುವಂತೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಒತ್ತಾಯಿಸಿದ್ದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿಎಂಗೆ ಪತ್ರ ಬರೆದಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹ ರಜೆ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಸಿಎಂ ಯಾರ ಒತ್ತಡಕ್ಕೂ ಮಣಿದಿಲ್ಲ.

RELATED ARTICLES

Related Articles

TRENDING ARTICLES