ತುಮಕೂರು : ನಾನು ರಾಮಮಂದಿರ ಉದ್ಘಾಟನೆಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸಿಎಂ ಹೋಗುತ್ತಿರುವುದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗಲ್ಲ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಳೆ ಬೆಂಗಳೂರಿನ ಮಹದೇವಪುರದಲ್ಲಿ ನೂತನ ರಾಮಮಂದಿರ ಉದ್ಘಾಟನಾ ಸಮಾರಂಭವಿದೆ. ಈ ಕಾರ್ಯಕ್ರಮಕ್ಕೆ ನಾನು ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ನಾಳೆ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ವಿಗ್ರಹ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಆದರೆ, ಜನವರಿ 22 (ನಾಳೆ) ರಂದು ಸರ್ಕಾರಿ ರಜೆ ಘೋಷಣೆ ಮಾಡಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿದ್ದಾರೆ.
ನಾಳೆ ರಜೆ ಘೋಷಿಸುವಂತೆ HDK ಮನವಿ
ನಾಳೆ ರಜೆ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನೂ, ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ತಾಯಿ ಚನ್ನಮ್ಮ ಹಾಗ ಪುತ್ರ ನಿಖಿಲ್ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.