Sunday, December 22, 2024

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ : ಸಿದ್ದರಾಮಯ್ಯ

ತುಮಕೂರು : ನಡೆದಾಡುವ ದೇವರು ಲಿಂ.ಡಾ. ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿದ್ಧಗಂಗಾ ಮಠದಲ್ಲಿ ನಡೆದ ಕರ್ನಾಟಕ ರತ್ನ, ಶತಾಯುಷಿ ಡಾ. ಶಿವಕುಮಾರ ಶ್ರೀಗಳ ಸ್ಮರಣಾರ್ಥ ನಿರ್ಮಿಸಿರುವ ‘ಸ್ಮೃತಿ ವನ’ವನ್ನು ಉದ್ಘಾಟಿನೆ ಹಾಗೂ ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಬಣ್ಣಿಸಿದರು.

ಕಾಯಕ, ದಾಸೋಹ ಜೀವನ ಮೌಲ್ಯಗಳು

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES