Wednesday, January 22, 2025

ನಾಳೆ ರಜೆ ಘೋಷಿಸುವಂತೆ ಸಿದ್ದುಗೆ ಆರ್. ಅಶೋಕ್ ಪತ್ರ : ಲೆಟರ್​ನಲ್ಲಿ ಏನಿದೆ..?

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ನಾಳೆ (ಜ.22) ರಜೆ ಘೋಷಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ.

500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲದಲಿ ರಾಮಮಂದಿರ ನಿರ್ಮಾಣವಾಗಿದೆ. ಜನವರಿ 22ರಂದು ರಾಮಲಲ್ಲಾನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಹೀಗಾಗಿ, ನಾಳೆ ಸಾರ್ವತ್ರಿಕ ರಜೆ ಘೋಷಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾಳೆ ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಈ ಸಮಾರಂಭದಲ್ಲಿ ಭಾಗವಹಿಸಲಿದ್ದು, ಈಗಾಗಲೇ ಕೇಂದ್ರ ಸರ್ಕಾರ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ.

ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆ ನೀಡಿ

ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನು ಘೋಷಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES