Monday, December 23, 2024

ನಾಳೆ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯ ದಿನಚರಿ!

ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ರಾಮನ ಪ್ರಾಣ ಪ್ರತಿಷ್ಟಾ ಅಂತಿಮ ಘಟ್ಟಕ್ಕೆ ತಲುಪಿದ್ದು ನಾಳೆ ಮಂತ್ರಘೋಷಗಳ ನಡುವೆ ಶ್ರೀರಾಮಚಂದ್ರನ ಮೂರ್ತಿ ಪ್ರತಿಷ್ಟಾಪನೆಯಾಗಲಿದೆ. ಈ ಹಿನ್ನೆಲೆ ಬಹುದಿನಗಳ ವ್ರತಾಚರಣೆ ಬಳಿಕ ಪ್ರಧಾನಿ ಮೋದಿ ಸಂಜೆ ವರೆಗೂ ಅಯೋಧ್ಯೆಯಲ್ಲಿ ಇರಲಿದ್ದು ಅವರ ದಿನಚರಿಯ ವಿವಿರಗಳ ಮಾಹಿತಿ ಇಲ್ಲಿದೆ.

ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದೆ. ಪ್ರಾಣಪ್ರತಿಷ್ಠೆ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.

ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ :

  • ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
  • 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
  • ಬೆಳಗ್ಗೆ 11ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
  • ಮಧ್ಯಾಹ್ನ 12.05 -12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
  • ಮಧ್ಯಾಹ್ನ 1-2: ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
  • ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
  • ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

RELATED ARTICLES

Related Articles

TRENDING ARTICLES