ಅಯೋಧ್ಯೆ: ಇಂದು (ಜ.22) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಟಾ ನೆರವೇರಲು ಕ್ಷಣಗಣನೆ ಆರಂಭವಾಗಿದೆ. ನೂರಾರು ವರ್ಷಗಳ ಹೋರಾಟದ ಕನಸು ನನಸಾಗುತ್ತಿರುವ ಈ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲು ದೇಶದ ಕೋಟ್ಯಾಂತರ ಜನ ಕಾಯುತ್ತಿದ್ದಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ದೇಶದ ವಿವಿಧೆಡೆಗಳಿಂದ ಆಹ್ವಾನಿತರು, ಸಾರ್ವಜನಿಕರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಬಿಲ್ಕಿಸ್ ಬಾನೊ ಪ್ರಕರಣದ 11 ಆರೋಪಿಗಳು ಜೈಲಿಗೆ ಶರಣು!
ರಾಮ ಜನ್ಮಭೂಮಿಯಲ್ಲಿ ರಾಮನ ಪ್ರಾಣ ಪ್ರತಿಷ್ಟಾ ಎಂದು ಎಲ್ಲೆಡೆ ಹೇಳಲಾಗುತ್ತಿದ್ದು, ಈ ಪ್ರಾಣ ಪ್ರತಿಷ್ಟಾ ಎಂದರೇ ಏನು? ಎನ್ನುವ ಪ್ರಶ್ನೆ ಕಾಡುತ್ತಿದೆ. ಇದಕ್ಕೆ ಉತ್ತರ ಈ ವರದಿಯಲ್ಲಿದೆ.
ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.
ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.