Sunday, December 22, 2024

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠಾ ಕಾರ್ಯ ಸುಸೂತ್ರ!

ಅಯೋಧ್ಯೆ: ಅಯೋಧ್ಯಾ ನಗರದ ರಾಮಮಂದಿರದಲ್ಲಿ ಇಂದು ರಾಮನ ಪ್ರಾಣಪ್ರತಿಷ್ಟಾ ಕಾರ್ಯವು ವಿಜೃಂಭಣೆಯಿಂದ ನೆರವೇರಿತು. ಪ್ರಧಾನಿ ಮೋದಿ ಈ ಕಾರ್ಯವನ್ನು ನಿಗದಿತ ಸಮಯಕ್ಕೆ ಸರಿಯಾಗಿ ನೆರವೇರಿಸಿದ್ದಾರೆ.

ಸುಮಾರು 500 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದ್ದು, ದೇಶಾದ್ಯಂತ ಸಂತಸ ಮನೆ ಮಾಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಂದಿರದಲ್ಲಿ ಇಂದಿನ ಪ್ರಮುಖ ಕಾರ್ಯಕ್ರಮಗಳು

ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿಯ ಛತ್ರವನ್ನು ಹಿಡಿದುಕೊಂಡು ರಾಮಮಂದಿರ ಪ್ರವೇಶಿಸಿದರು. ಇದಾದ ಬಳಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು, ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್‌ದಾಸ್‌ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠೆ ನೆರವೇರಿಸಿದರು.

RELATED ARTICLES

Related Articles

TRENDING ARTICLES