Wednesday, January 22, 2025

ದೇವಾಲಯ ಪ್ರವೇಶ ನಿರಾಕರಣೆ: ನಾನು ಮಾಡಿರುವ ಅಪರಾಧವೇನು ಎಂದ ರಾಹುಲ್ ಗಾಂಧಿ!

ಅಸ್ಸಾಂ: ಪ್ರಸಿದ್ಧ ದೇವಸ್ಥಾನವೊಂದರಲ್ಲಿ ರಾಹುಲ್​ ಗಾಂಧಿ ಪ್ರವೇಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ನಾನು ಮಾಡಿರುವ ತಪ್ಪಾದರೂ ಏನು ಎಂದು ರಾಹುಲ್ ಗಾಂಧಿ ಪ್ರಶ್ನಿಸಿರುವ ಘಟನೆ ಇಂದು ನಡೆದಿದೆ.

ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಈ ನಡುವೆ,  ಸ್ಥಳೀಯ ಸಂಸದರು ಮತ್ತು ಶಾಸಕರಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ನಾಗಾಂವ್‌ನಲ್ಲಿ ಧರಣಿ ನಡೆಸಿದರು.

ಇದನ್ನೂ ಓದಿ: ಅಯೋಧ್ಯೆ ರಾಮಂದಿರದಲ್ಲಿ ಇಂದಿನ ಪ್ರಮುಖ ಕಾರ್ಯಕ್ರಮಗಳು

ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾನು ದೇವಾಲಯಕ್ಕೆ ಭೇಟಿ ನೀಡಲಾಗದಂತಹ ಅಪರಾಧವೇನು ಮಾಡಿದ್ದೇವೆ ಎಂದು ಪ್ರಶ್ನಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ದಿನವಾದ ಸೋಮವಾರ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ತೆರಳಲಿರುವ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳ ಸೂಕ್ಷ್ಮ ಮಾರ್ಗಗಳಲ್ಲಿ ಕಮಾಂಡೋಗಳನ್ನು ನಿಯೋಜಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದೊಂದಿಗೆ ಸಂಭಾವ್ಯ ಘರ್ಷಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆ’ ಮಾರ್ಗವನ್ನು ಮರುಪರಿಶೀಲಿಸುವಂತೆ ರಾಹುಲ್ ಗಾಂಧಿಯನ್ನು ಒತ್ತಾಯಿಸಿದ್ದರು.

RELATED ARTICLES

Related Articles

TRENDING ARTICLES