Friday, November 22, 2024

ರಾಮನ ಹೆಸರಲ್ಲಿ ರಾಜಕೀಯ ನಡೆಯುತ್ತಿದೆ, ಇದನ್ನು ನೋಡುತ್ತಾ ಕೂರಬೇಕೆ? : ವಿವಾದದ ಕಿಡಿ ಎಬ್ಬಿಸಿದ ಶ್ರುತಿ ಹರಿಹರನ್

ಬೆಂಗಳೂರು : ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠಾ ಸಮಾರಂಭ ರಾಜಕೀಯಗೊಳಿಸುವುದನ್ನು ಸುಮ್ಮನೆ ನೋಡುತ್ತಾ ಕೂರಲಾಗದು ಎಂದು ನಟಿ ಶ್ರುತಿ ಹರಹರನ್ ಹೇಳಿದ್ದಾರೆ.

ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿರುವ ಅವರು, ಧರ್ಮದ ವಿಷಯದಲ್ಲಿ ರಾಜಕೀಯ ನಡೆಯುತ್ತಿದೆ. ಇದು ಸುಮ್ಮನೆ ನೋಡುತ್ತಾ ಕೂರಬೇಕಾದ ಸಂಗತಿಯಲ್ಲ ಎಂದು ಬರೆದುಕೊಂಡಿದ್ದಾರೆ.

‘ಜೈ ಶ್ರೀರಾಮ್’ ಎಂದು ಹೇಳಲು ಯಾವುದೇ ತೊಂದರೆ ಇಲ್ಲ. ರಾಮನ ಗುಣಗಳಿಂದ ಯಾರು ತಾನೆ ಪ್ರೇರಿತರಾಗುವುದಿಲ್ಲ? ಹನುಮಂತನು ರಾಮ ತನ್ನಲ್ಲಿದ್ದಾನೆ ಎನ್ನುವುದನ್ನು ತೋರಿಸಲು ಎದೆಯನ್ನೇ ಸೀಳಿದ್ದು ಕಾಕತಾಳೀಯವಲ್ಲ. ರಾಮನನ್ನು ನಮ್ಮೊಳಗೆ ನಾವು ಹುಡುಕಿಕೊಳ್ಳಬೇಕು. ಈ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿಯೇ ರಾಮಾಯಣದೊಳಗೆ ಇದನ್ನು ಸೇರಿಸಲಾಗಿದೆಯೇ? ಪ್ರಶ್ನಿಸಿದ್ದಾರೆ.

ಪ್ರಸ್ತುತ ಸಮಯದಲ್ಲಿ ಸಂವಿಧಾನ ನೆನಪಿಸಿಕೊಳ್ಳುವುದು ಏಕೆ ಮುಖ್ಯ? ಸದ್ಯದ ಪರಿಸ್ಥಿತಿಯಲ್ಲಿ ಯಾವುದು ಉತ್ತಮವೋ ಅದರಲ್ಲಿ ಸಾಗಬೇಕು. ಈ ಸಂದರ್ಭದಲ್ಲಿ ಸಂವಿಧಾನ ನೆನೆಯುವುದು ಅಗತ್ಯ. ಏಕೆಂದರೆ, ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಅಲ್ಲದೆ, ಯಾವುದೇ ನಿರ್ದಿಷ್ಟ ಧರ್ಮವನ್ನು ಪೋಷಿಸುವುದು ಅಥವಾ ಅದರ ವಿರುದ್ಧ ತಾರತಮ್ಯ ಮಾಡಬಾರದು ಎಂದು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಇಂದು ಧರ್ಮವನ್ನು ರಾಜಕೀಯಗೊಳಿಸಲಾಗುತ್ತಿದೆ. ಇದನ್ನು ನೋಡಿಯೂ ಸುಮ್ಮನೆ ಕೂತು, ಗಮನಿಸುವುದೂ ಸರಿಯಲ್ಲ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES